March 25, 2026

ಮುಂಬೈ: ಮುಸ್ಲಿಮ್ ಧಾರ್ಮಿಕ ಮುಖಂಡನ ಗುಂಡಿಕ್ಕಿ ಹತ್ಯೆ

0
image_editor_output_image221359315-1657084575695.jpg

ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೋಲಾ ಪಟ್ಟಣದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳ ತಂಡವು ಅಫ್ಘಾನಿಸ್ತಾನ ಮೂಲದ 35 ವರ್ಷದ ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿದೆ.

ಮುಂಬೈನಿಂದ ಸುಮಾರು 200 ಕಿಮೀ ದೂರದಲ್ಲಿರುವ ಯೋಲಾ ಪಟ್ಟಣದ ಎಂಐಡಿಸಿ ಪ್ರದೇಶದ ಪ್ಲಾಟ್‌ನಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಖ್ವಾಜಾ ಸಯ್ಯದ್ ಚಿಶ್ತಿ ಎಂದು ಗುರುತಿಸಲಾಗಿದ್ದು, ಯೋಲಾದಲ್ಲಿ ‘ಸೂಫಿ ಬಾಬಾ’ ಎಂದು ಜನಪ್ರಿಯತೆ ಗಳಿಸಿದ್ದು, ಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!