March 26, 2026

ಪುತ್ತೂರು: ಹೆಬ್ಬಾವನ್ನು ಕೊಂದು ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿದ್ದ ಇಬ್ಬರು ಆರೋಪಿಗಳ ಬಂಧನ

0
image_editor_output_image-231281276-1657086447882.jpg

ಪುತ್ತೂರು: ಹೆಬ್ಬಾವೊಂದನ್ನು ಕೊಂದು ಅದನ್ನು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ತಾಲೂಕಿನ ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ (38) ಮತ್ತು ಜಯ(36) ಬಂಧಿತ ಆರೋಪಿಗಳು.

ಅವರು ಮನೆಗೆ ಬಂದಿದ್ದ ಹೆಬ್ಬಾವನ್ನು ಕೊಂದು ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ್ದರು. ಹೆಬ್ಬಾವನ್ನು ಕೊಲ್ಲುವುದು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗಿರುವ ಕಾರಣ ಪ್ರಕರಣ ಪತ್ತೆ ಹಚ್ಚಿದ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿ ಕೇಸು ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ನ್ಯಾಯಾಲಯವು ಆರೋಪಿಗಳಿಗೆ ಜು.೧೫ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!