February 4, 2026

ಗುರೂಜಿ ಕೊಲೆ ಪ್ರಕರಣ: ಐದು ದಿನಗಳ ಹಿಂದೆ ಆರೋಪಿ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಹಾಕಿದ್ದ ಪೋಸ್ಟ್ ವೈರಲ್

0
image_editor_output_image-703537783-1657090731247.jpg

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಅವರ ಕೊಲೆ ಪ್ರಕರಣದ ಆರೋಪಿ ಮಹಾಂತೇಶ ಶಿರೂರ ಐದು ದಿನಗಳ ಹಿಂದೆಯೇ ಗುರೂಜಿ ಕೊಲೆಯ ಸುಳಿವು ನೀಡಿದ್ದನೇ…? ಹೌದು ಎನ್ನುತ್ತದೆ ಐದು ದಿನಗಳ ಹಿಂದೆ ಆರೋಪಿ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಹಾಕಿದ್ದ ಪೋಸ್ಟ್.

ಫೇಸ್‌ಬುಕ್‌ ನಲ್ಲಿ ಭಗವದ್ಗೀತೆಯ ಶ್ಲೋಕದ ಪೋಸ್ಟ್ ಅನ್ನು ಶೇರ್ ಮಾಡಿದ್ದ ಆರೋಪಿ, ‘ಅಧರ್ಮ ತಾಂಡವಾಡುತ್ತಿರುವಾಗ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ‌ ನೀಡಿರುವೆ ಪ್ರಭು. ಇನ್ನು ವಿಳಂಬವೇಕೆ ಪ್ರಭುವೇ? ಆದಷ್ಟು ಬೇಗ ಅವತರಿಸು ಪ್ರಭು. ಸಂಭವಾಮಿ ಯುಗೇ ಯುಗೇ…’ ಎಂದು ಬರೆದುಕೊಂಡಿದ್ದಾನೆ.

ಈ ಪೋಸ್ಟ್ ಅನ್ನು ಫೇಸ್‌ಬುಕ್‌ನಲ್ಲಿ ಶೇರ್ ಮಾಡಿಕೊಂಡ ಐದು ದಿನಗಳಲ್ಲೇ, ಆರೋಪಿ ಗುರೂಜಿ ಅವರನ್ನು ಕೊಲೆ ಮಾಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!