ಡೋಲೋ 650 ಮಾತ್ರೆ ತಯಾರಿಕಾ ಘಟಕಗಳ 40ಕ್ಕೂ ಹೆಚ್ಚು ಕಡೆ ಐಟಿ ದಾಳಿ
ಬೆಂಗಳೂರು: ಡೋಲೋ 650 ಮಾತ್ರೆ ತಯಾರಿಕಾ ಮತ್ತು ಮಾರಾಟ ಘಟಕಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಧಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ 40ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ.
ಕೊರೊನಾ ವ್ಯಾಪಕವಾಗಿದ್ದ ಸಂದರ್ಭದಲ್ಲಿ ಅತಿ ಹೆಚ್ಚು ಆದಾಯ ಗಳಿಸಿದ್ದ ಕಂಪೆನಿಯು ಅದಕ್ಕೆ ಸರಿಯಾಗಿ ಆದಾಯ ತೆರಿಗೆ ಪಾವತಿಸದ ಕಾರಣ ಈ ಧಾಳಿ ನಡೆಸಲಾಗಿದೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮೈಕ್ರೋ ಲ್ಯಾಬ್ಸ್ ಕೇಂದ್ರ ಕಚೇರಿ, ತಮಿಳುನಾಡು, ಗೋವಾ, ಪಂಜಾಬ್, ಮುಂಬೈ, ದೆಹಲಿ, ಸಿಕ್ಕಿಂ ಸೇರಿ ದೇಶದ 40 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಧಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸಂಸ್ಥೆಯ ಸಿಎಂಡಿ ದಿಲೀಪ್ ಸುರಾನಾ, ನಿರ್ದೇಶಕ ಆನಂದ್ ಸುರಾನ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.




