February 3, 2026

ಕೆಎಸ್ಆರ್‌ಟಿಸಿ ಬಸ್, ಕಾರು ಮಧ್ಯೆ ನಡೆದ ಅಪಘಾತ: ಮೂವರು ಮೃತ್ಯು

0
image_editor_output_image-2001169395-1657177222689.jpg

ತುಮಕೂರು: ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರು ಮಧ್ಯೆ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ತಿಪಟೂರು ತಾಲ್ಲೂಕಿನ ತಿಮ್ಲಾಪುರ- ಮತ್ತೀಹಳ್ಳಿ ಗೇಟ್ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.

ಮೃತರು ಶಿರಾ ಸಮೋಪದ ಕಡವಗೆರೆ ನಿವಾಸಿಗಳು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿದ್ದಾರೆ. ಧರ್ಮಸ್ಥಳಕ್ಕೆ ಕಾರಿನಲ್ಲಿ ತೆರಳುತ್ತಿದ್ದರು.

ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಎದುರಿಗೆ ಬರುತ್ತಿದ್ದ ಕಾರು ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!