ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬದಿಯಲ್ಲಿ ಕುಸಿತ:ಸ್ಥಳೀಯ ನಿವಾಸಿಗಳಲ್ಲಿ ಆತಂಕ
ಮಂಗಳೂರು, ನಗರ ಹೊರವಲಯದ ಬಜ್ಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬದಿಯಲ್ಲಿ ಕುಸಿತ ಉಂಟಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.
ಭಾರೀ ಮಳೆಯ ಕಾರಣದಿಂದಾಗಿ ರನ್ ವೇ ಬದಿ ಕುಸಿತಗೊಂಡಿದೆ. ಭಾರೀ ಮಳೆಯ ಕಾರಣದಿಂದಾಗಿ ಏರ್ ಪೋರ್ಟ್ ರನ್ ವೇ ಸಮೀಪದ ರಸ್ತೆ ಕುಸಿತಗೊಂಡಿದೆ. ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಇನ್ನು ಮಂಗಳೂರಿನಲ್ಲಿರುವುದು ಟೇಬಲ್ ಟಾಪ್ ಏರ್ ಪೋರ್ಟ್ ಆಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಏರ್ ಪೋರ್ಟ್ ಅಧಿಕಾರಿಗಳು ಭೇಟಿ ನೀಡಿದ್ದು, ತುರ್ತು ಕ್ರಮಕ್ಕೆ ಮುಂದಾಗಿದ್ದಾರೆ.




