ಪೆರ್ನೆ: ಹೆದ್ದಾರಿ ಬದಿಯ ಹೊಂಡಕ್ಕೆ ಮಗುಚಿ ಬಿದ್ದ ಲಾರಿ
ಮಾಣಿ: ಲಾರಿಯೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಹೆದ್ದಾರಿ ಚತುಷ್ಪತ ಕಾಮಗಾರಿ ನಡೆಯುತ್ತಿದ್ದು, ಹೆದ್ದಾರಿ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದೇ ಸ್ಥಳದಲ್ಲಿ ಪ್ರತಿನಿತ್ಯ ಹಲವು ವಾಹನಗಳು ಅಪಘಾತಕ್ಕೀಡಾಗುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.




