February 2, 2026

ನದಿಯ ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರು: 9 ಮಂದಿ ಸ್ಥಳದಲ್ಲೇ ಮೃತ್ಯು

0
image_editor_output_image1332062248-1657254674952.jpg

ಡೆಹ್ರಾಡೂನ್: ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿ ಉಕ್ಕಿ ಹರಿಯುತ್ತಿದೆ. ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿರಂತರ ಮಳೆಯಿಂದಾಗಿ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ಹಲವೆಡೆ ರಸ್ತೆಗಳು, ಹಳ್ಳಗಳು ತುಂಬಿಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

Leave a Reply

Your email address will not be published. Required fields are marked *

error: Content is protected !!