February 2, 2026

ಕುರ್ ಆನ್, ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ: ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕನ ವಿರುದ್ಧ ಪ್ರಕರಣ ದಾಖಲು

0
image_editor_output_image814110025-1657271261148.jpg

ಕೋಲಾರ: ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೋಲಾರ ಪೊಲೀಸರು ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅಂಜುಮನ್-ಎ-ಇಸ್ಲಾಮಿಯಾ ಸಂಘಟನೆಯ ಅಧ್ಯಕ್ಷ ಜಮೀರ್ ಅಹಮದ್ ಅವರು ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ದೂರು ನೀಡಿದ್ದರು.

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯನ್ನು ವಿರೋಧಿಸಿ ಜುಲೈ 1 ರಂದು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಭಾಷಣದಲ್ಲಿ ಕೇಶವ ಮೂರ್ತಿ “ಕುರಾನ್ ಜನರನ್ನು ಕೊಲ್ಲು ಎಂದು ಹೇಳುತ್ತದೆ. ಆದ್ದರಿಂದ ಕುರಾನ್ ಅನ್ನು ಓದುವವರು ಅದನ್ನು ಅನುಸರಿಸುತ್ತಾರೆ ಎಂದು ನೀವು ಭಾವಿಸುವುದಿಲ್ಲವೇ? ಕುರಾನ್ ಓದುವವರು ಭಯೋತ್ಪಾದಕರು” ಎಂದು ಹೇಳಿದ್ದರೆನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!