ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಗುಂಡೇಟಿಗೆ ಬಲಿ
ಟೋಕಿಯೋ: ಜಪಾನ್ ದೇಶವನ್ನು ಅತೀ ಹೆಚ್ಚು ಕಾಲ ಆಳ್ವಿಕೆ ನಡೆಸಿದ್ದ ಮಾಜಿ ಪ್ರಧಾನಿ ಶಿಂಜೋ ಅಬೆ ಅವರು ಇಂದು ಮೃತರಾಗಿದ್ದಾರೆ. ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅವರು ಗುಂಡೇಟಿಗೆ ಬಲಿಯಾಗಿದ್ದಾರೆ.
ಅಭಿಯಾನದಲ್ಲಿ ಪಾಲ್ಗೊಂಡಿದ್ದ 67 ವರ್ಷದ ಶಿಂಜೋ ಅಬೆ ಅವರ ಎದೆಗೆ ಗುಂಡು ಹಾರಿಸಲಾಗಿದೆ. ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.




