ಪುತ್ತೂರು: ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ
ಪುತ್ತೂರು: ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಪ್ಪಳಿಗೆಯ ಬಲ್ನಾಡು ಸಂಪರ್ಕ ರಸ್ತೆಯಲ್ಲಿ ನಡೆದಿದೆ.
ಬಲ್ನಾಡು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾವೊಂದನ್ನು ಹಿಂದಿಕ್ಕುವ ಭರದಲ್ಲಿದ್ದ ಆಕ್ಟಿವಾಗೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ.
ಘಟನೆಯಿಂದ ಆಕ್ಟಿವಾ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ..




