ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಎಸೆಸೆಲ್ಸಿ ವಿದ್ಯಾರ್ಥಿಗಳ ಬಂಧನ
ಚೆನ್ನೈ: ಸಹಪಾಠಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹತ್ತನೆ ತರಗತಿಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅತ್ಯಾಚಾರ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಇತರ ವಿದ್ಯಾರ್ಥಿಗಳ ಜೊತೆ ಆರೋಪಿಗಳು ಶೇರ್ ಮಾಡಿರುವುದಾಗಿ ವರದಿ ತಿಳಿಸಿದೆ. ಆರೋಪಿತ ಮೂವರು ಅಪ್ರಾಪ್ತ ವಿದ್ಯಾರ್ಥಿಗಳು ಕಡಲೂರು ಜಿಲ್ಲೆಯವರಾಗಿದ್ದಾರೆ.
ಥಿಟ್ಟಾಕುಡಿ ಪೊಲೀಸ್ ಇನ್ಸ್ ಪೆಕ್ಟರ್ ಕೃಪಾ ಅವರು ನೀಡಿರುವ ಮಾಹಿತಿ ಪ್ರಕಾರ, ಸಂತ್ರಸ್ತ ವಿದ್ಯಾರ್ಥಿನಿ ಮತ್ತು ಆಕೆಯ ಪ್ರಿಯತಮನ ಜೊತೆಗಿರುವ ಫೋಟೋವನ್ನು ತೋರಿಸಿ ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ತಿಳಿಸಿದ್ದಾರೆ.




