March 26, 2026

ಕರಾವಳಿ ಭಾಗದಲ್ಲಿ ಬಿರುಸಿನ ಮಳೆ: ಜುಲೈ 12ರವರೆಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

0
image_editor_output_image1875541606-1657361221975.jpg

ಮಂಗಳೂರು: ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು ಜುಲೈ 12 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ.

ಮುಂದಿನ 48 ಗಂಟೆಗಳಲ್ಲಿ ಮತ್ತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜು.7 ರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಇದೀಗ ಜುಲೈ 12 ರವರೆಗೆ ಮುಂದುವರಿಯಲಿದೆ. ಈ ವೇಳೆ ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಜು.13, 14 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ , ಪ್ರವಾಸಿಗರು ನದಿ ಹಾಗೂ ಸಮುದ್ರಕ್ಕೆ ತಗ್ಗು ಪ್ರದೇಶದತ್ತ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಜುಲೈ 19ರ ತನಕ ಮಳೆಯಾಗಲಿದ್ದು, ಅಲ್ಲದೇ ಮುಂಬೈ, ಮಹಾರಾಷ್ಟ್ರ, ಕೇರಳ, ಆಂಧ್ರ ಪ್ರದೇಶದ ಹಲವು ಭಾಗದಲ್ಲಿಯೂ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!