ಕಾಣಿಯೂರು: ಹೊಳೆಗೆ ಬಿದ್ದ ಕಾರು: ಸಿ.ಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು. 9 ರಂದುರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದೆ ಎನ್ನಲಾಗಿದೆ.
ಕಾರು ಹೊಳೆಗೆ ಬಿದ್ದ ದೃಶ್ಯ ಮಸೀದಿಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಕಾರು ಸೇತುವೆಗೆ ತಡೆ ಬೇಲಿಗೆ ಡಿಕ್ಕಿ ಹೊಡೆದು ಹೊಳೆಗೆ ಬೀಳುವ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ತಡೆಬೇಲಿಯಲ್ಲಿ ಕಾರು ಡಿಕ್ಕಿಯಾಗಿರುವ ಕುರುಹು ಇದೆ ಎಂದು ಅಲ್ಲಿ ನೆರೆದವರು ತಿಳಿಸಿದ್ದಾರೆ.




