ಕಾಣಿಯೂರು: ನದಿ ಪಾಲಾಗಿದ್ದ ಕಾರನ್ನು ಮೇಲೆಕ್ಕೆತ್ತುವ ಕಾರ್ಯಾಚರಣೆ ಯಶಸ್ವಿ: ಕಾರಿನಲ್ಲಿದ್ದವರು ನಾಪತ್ತೆ: ಇಬ್ಬರು ನೀರು ಪಾಲಾಗಿರುವ ಸಾಧ್ಯತೆ!
ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು 9ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದ್ದು, ನೀರುಪಾಲಾಗಿರುವ ಕಾರು ಇದೀಗ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಕಾರು ಹೊಳೆಗೆ ಬಿದ್ದ ದೃಶ್ಯ ಮಸೀದಿಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೊಳೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿರುವ ಹಿನ್ನೆಲೆ ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬಿದ್ದ ಜಾಗದಿಂದ 100 ಮೀ. ದೂರದಲ್ಲಿ ಕಾರು ಪತ್ತೆಯಾಗಿತ್ತು. ಆದರೇ ಅದನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದಾಗ ನೀರು ಹರಿಯುವ ರಭಸಕ್ಕೆ ಕಾರು ಮತ್ತೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇದೀಗ ಮತ್ತೆ ಹರಸಾಹಸ ಪಟ್ಟು ಅಗ್ನಿಶಾಮಕ ದಳದ ಸಿಬ್ಬಂದಿ ಕಾರನ್ನು ಮೇಲಕ್ಕೆತ್ತಿದ್ದಾರೆ.
ಆದರೇ ಕಾರಿನಲ್ಲಿದ್ದವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನೀರಿನ ರಭಸಕ್ಕೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ವಿಟ್ಲದ ಕುಂಡಡ್ಕ ಮೂಲದ ಧನುಷ್ ಹಾಗೂ ಮಂಜೇಶ್ವರ ಮೂಲದ ಧನುಷ್ ಎಂದು ಹೇಳಲಾಗುತ್ತಿದ್ದು, ಮೃತದೇಹ ಪತ್ತೆಯಾಗಬೇಕಿದೆ.




