August 25, 2026

ನಂದಳಿಕೆ: ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ: ಸಹೋದರರಿಬ್ಬರು ಮೃತ್ಯು

0
IMG-20220710-WA0034.jpg

ಬೆಳ್ಮಣ್: ಕಾರು-ಸ್ಕೂಟರ್‌ ಢಿಕ್ಕಿ ಹೊಡೆದ ಪರಿಣಾಮ ಸಹೋದರರಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ನಂದಳಿಕೆ ಮಾವಿನಕಟ್ಟೆಯ ಬಳಿ ನಡೆದಿದೆ.

ನಂದಳಿಕೆಯ ನಿವಾಸಿಗಳಾದ ಸತೀಶ್ ಕುಲಾಲ್(28) ಹಾಗೂ ಸಂದೀಪ್ ಕುಲಾಲ್ ಮೃತ ದುರ್ದೈವಿಗಳು.

ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿದ್ದ ಇನೋವಾ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಪರಿಣಾಮ ಸಂದೀಪ್ ಸ್ಥಳದಲ್ಲಿಯೇ ಮೃತಪಟ್ಟರೆ, ಸತೀಶ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಸಂದೀಪ್ ಅವಿವಾಹಿತರಾಗಿದ್ದು, ಸತೀಶ್ ಗೆ ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿತ್ತು ಎಂದು ತಿಳಿದು ಬಂದಿದೆ. ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಠಾಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!