ದ.ಕ ಜಿಲ್ಲೆಯಲ್ಲಿ ನಾಳೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ: ಕಾಲೇಜ್ ಗಳು ಓಪನ್
ಮಂಗಳೂರು: ರಾಜ್ಯದ ವಿವಿಧೆಡೆ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ರಜೆ ಘೋಷಿಸಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ ಅಂಗನವಾಡಿ, ಪ್ರಾಥಮಿಕ ಹಾಗೂ ಶಾಲೆಗಳಿಗೆ ರಜೆ ನೀಡಲಾಗಿದ್ದು, ಕಾಲೇಜುಗಳಿಗೆ ತರಗತಿ ನಡೆಯಲಿದೆ.
ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಸೋಮವಾರ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸತತವಾಗಿ ಕಳೆದ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು, ಒಂದು ವಾರ ರಜೆ ನೀಡಲಾಗಿತ್ತು. ಇಂದು ಸಂಜೆ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದರಿಂದ ಮತ್ತೆ ರಜೆ ನೀಡಲಾಗಿದೆ. ಆದರೆ ಪದವಿ ಪೂರ್ವ, ಡಿಗ್ರಿ ಕಾಲೇಜ್ ತೆರೆಯಲಿದೆ.




