ಸೂರಿಕುಮೇರು: ಹೆದ್ದಾರಿಗೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ
ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರ್ ನಲ್ಲಿ ಗುಡ್ಡ ಕುಸಿದು ಹೆದ್ದಾರಿ ಕುಸಿದು ಬಿದ್ದ ಪರಿಣಾಮ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.



ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ ನಡೆಸಲಾಗಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬಳಿಕ ಸ್ಥಳೀಯರು ಮಣ್ಣನ್ನು ತೆರವುಗೊಳಿಸಲು ಯತ್ನಿಸುತ್ತಿದ್ದು, ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ಪ್ರಾರಂಭಗೊಂಡಿದೆ.




