March 26, 2026

ಶಾಲಾ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image360562247-1657527969595.jpg

ಕವಿತಾಳ: ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಸ್ಕಿ ತಾಲ್ಲೂಕಿನ ಡೊಣಮರಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಲಿಂಗಸೂಗುರು ತಾಲ್ಲೂಕಿನ ಆನ್ವರಿ ಗ್ರಾಮದ ಗಂಗಪ್ಪ ಮಲ್ಲಯ್ಯ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ, ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ ಮಸ್ಕಿ ತಾಲ್ಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬ್ಬಂಧಿಕರ ಮನೆಯಲ್ಲಿ ವಾಸವಿದ್ದ ಎನ್ನಲಾಗಿದೆ.

ಸೋಮವಾರ ಬೆಳಿಗ್ಗೆ ಶಾಲೆಗೆ ಹೋಗುವುದಾಗಿ ಹೇಳಿ ಹೋದ ಬಾಲಕ ಡೊಣಮರಡಿ ಸರ್ಕಾರಿ ಶಾಲಾ ಆವರಣದಲ್ಲಿನ ಗಿಡಕ್ಕೆ ನೇಣು ಹಾಕಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಕವಿತಾಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!