July 6, 2026

ನಗರಸಭೆಯ ಮಾಜಿ ಅಧ್ಯಕ್ಷನ ಮಾರಕಾಸ್ತ್ರದಿಂದ ಇರಿದು ಹತ್ಯೆ

0
image_editor_output_image1822340699-1657545945236.jpg

ಕಲಬುರಗಿ: ಜಿಲ್ಲೆಯ ಶಹಾಬಾದ್ ನಗರಸಭೆಯ ಮಾಜಿ ಅಧ್ಯಕ್ಷ  ಗಿರೀಶ್ ಕಂಬಾನೂರ ಅವರನ್ನು ಸೋಮವಾರ ಮಧ್ಯಾಹ್ನ ಶಹಾಬಾದ್ ರೈಲು ನಿಲ್ದಾಣದಲ್ಲಿ ಮಾರಕಾಸ್ತ್ರದಿಂದ ಇರಿದು ಹತ್ಯೆಗೈಯಲಾಗಿದೆ.‌

ಮುಂದಿನ ವಾರ ಬೆಂಗಳೂರಿಗೆ ತೆರಳಲು ಟಿಕೆಟ್ ಕಾಯ್ದಿರಿಸಲು ರೈಲು ನಿಲ್ದಾಣಕ್ಕೆ ಬಂದ ಸಂದರ್ಭದಲ್ಲಿ ಆಟೋ ಹಾಗೂ ಬೈಕ್ ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಚೆ ಇರಿದು ಕೊಲೆಗೈದಿದ್ದಾರೆ.

ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಗಿರೀಶ ಕಂಬಾನೂರ ಅವರನ್ನು ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿತ್ತಾದರೂ ದಾರಿ‌ ನಡುವೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You may have missed

error: Content is protected !!