ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಪಂಗಾಳ ಸೇತುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಮಗುಚಿ ಬಿದ್ದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

