ಪಂಜಿಕಲ್ಲು ದುರಂತ: ಸಂತ್ರಸ್ತ ಕೇರಳದ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದ ಮುಖ್ಯಮಂತ್ರಿ
ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಜು.4ರಂದು ಗುಡ್ಡ ಜರಿದು ಮೃತಪಟ್ಟ ಕೇರಳದ ಮೂವರು ಕಾರ್ಮಿಕರ ಕುಟುಂಬಕ್ಕೆ ಸರಕಾರದ ವತಿಯಿಂದ ತಲಾ 5 ಲಕ್ಷ ರೂ. ನಂತೆ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳವಾರ ವಿತರಿಸಿದರು.
ಘಟನೆಯಿಂದ ಮೃತಪಟ್ಟ ಬಿಜು ಪಾಲಕ್ಕಡ್, ಸಂತೋಷ್ ಅಲಪುರ, ಬಾಬು ಕೊಟ್ಟಾಯಂ ಅವರ ಕುಟುಂಬ ಸದಸ್ಯರನ್ನು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕಂದಾಯ ಸಚಿವ ಆರ್.ಆಶೋಕ್, ಸಚಿವರಾದ ಎಸ್.ಆಂಗಾರ, ಸುನಿಲ್ ಕುಮಾರ್, ಸಿ.ಸಿ.ಪಾಟೀಲ್, ಶಾಸಕರಾದ ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ವಿಭಾಗಾಧಿಕಾರಿ ಮದನ್ ಮೋಹನ್, ಸಿಒ ಡಾ. ಕುಮಾರ್, ಮಾಜಿ ಸಚಿವ ಪ್ರಮೋದ್ ಮದ್ವರಾಜ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.




