May 11, 2026

ಅಸ್ಸಾಂ: ಬೆಂಕಿ ಅವಘಡದಲ್ಲಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ನಾಶ

0
Screenshot_20210924-175646_Chrome.jpg

ಅಸ್ಸಾಂ: ಕಮ್ರೂಪ್ ಜಿಲ್ಲೆಯ ರಂಗಿಯಾ ಪಟ್ಟಣದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಲವಾರು ಮನೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸುಟ್ಟುಹೋಗಿವೆ ಮತ್ತು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ರಾತ್ರಿ ನಡೆದ ಬೆಂಕಿ ಅವಘಡದಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ. ಪಟ್ಟಣದ ಮೃತುಂಜಯ ಶಿವ ದೇವಾಲಯದ ಬಳಿ ಗುರುವಾರ ರಾತ್ರಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡು ಹಲವಾರು ಮನೆಗಳು, ಅಂಗಡಿಗಳು, ಗೋದಾಮುಗಳು ಸುಟ್ಟು ಕರಕಲಾಗಿವೆ.

ಎಂಟು ಅಗ್ನಿಶಾಮಕ ವಾಹನಗಳು ಮತ್ತು ಸ್ಥಳೀಯ ಜನರ ಸಹಾಯದಿಂದ ಎರಡು ಗಂಟೆಗಳಿಗೂ ಹೆಚ್ಚು ಸಮಯದ ನಂತರ ಬೆಂಕಿಯನ್ನು ನಂದಿಸಲು ಸಾಧ್ಯವಾಯಿತು. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಅಂದಾಜಿಸಲಾಗಿದೆ, ಆದರೆ ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!