February 3, 2026

ಬಂಟ್ವಾಳ: ಕಮರಿಗೆ ಉರುಳಿದ ಕಾರು: ಆರು ತಿಂಗಳ ಮಗು ಸಹಿತ ಪ್ರಯಾಣಿಕರು ಅಪಾಯದಿಂದ ಪಾರು

0
IMG-20220713-WA0004.jpg

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಜಾರಿಗೆ ಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ, ಪೌಜಿಯಾ, ಸೌದ ಮತ್ತು ಮಗು 6 ತಿಂಗಳ ಮಗು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಕಮರಿಗೆ ಉರುಳಿ ತಲೆಕೆಳಗಾಗಿ ಕಾರು ಬಿದ್ದಿದೆ.

ರಾಷ್ಟ್ರೀಯ ಹೆದ್ದಾರಿ ಹಲವಾರು ತಿರುವುಗಳನ್ನು ಹೊಂದಿದ್ದು, ಕಳೆದ ಕೆಲ ದಿನಗಳಿಂದ ಸುರಿಯುವ ಮಳೆಗೆ ಹೆದ್ದಾರಿ ಪಕ್ಕದ ಗುಡ್ಡ ಜರಿದು ರಸ್ತೆಗೆ ಮಣ್ಣು ಬಿದ್ದಿರುವ ಹಿನ್ನೆಲೆಯಲ್ಲಿ ರಸ್ತೆ ಜಾರುತ್ತಿದ್ದು, ಅವಘಡ ಸಂಭವಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!