February 2, 2026

ಕಾರು, ಆಟೊ ಮುಖಾಮುಖಿ ಢಿಕ್ಕಿ: ಆಟೊದಲ್ಲಿದ್ದ ಮೂವರು ಮೃತ್ಯು, ಇಬ್ಬರು ಗಂಭೀರ ಗಾಯ

0
image_editor_output_image2094520177-1657775832082.jpg

ಮಂಡ್ಯ: ಕಾರು ಮತ್ತು ಆಟೊ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೊದಲ್ಲಿದ್ದ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ಪಟ್ಟಣದ ಹೊರವಲಯ ಕಣಿಗಲ್ ಗೇಟ್ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಬೆಂಗಳೂರು ಮೂಲದ ರವಿಕುಮಾರ್(50), ಭಾಸ್ಕರ್ (48) ಮತ್ತು ಆಟೊ ಚಾಲಕ ಮದ್ದೂರು ತಾಲ್ಲೂಕಿನ ಹುಲಿಗೆರೆ ಗ್ರಾಮದ ಶ್ರೀನಿವಾಸ್ (35) ಮೃತಪಟ್ಟವವರು.

ರವಿಕುಮಾರ್ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದು, ತಮ್ಮ ಹುಟ್ಟೂರು ತಾಲ್ಲೂಕಿನ ಕಣಿಕಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ವಾಪಸ್ ಬೆಂಗಳೂರಿಗೆ ಆಟೊದಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ಕಣಿಗಲ್ ಬಳಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಆಟೊ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ‌ ಕಾರು ಸಹ ಜಖಂಗೊಂಡಿದೆ. ಸ್ಥಳಕ್ಕೆ ಡಿವೈಎಸ್ಪಿ ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!