February 2, 2026

ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಯುವಕ‌ ಮೃತ್ಯು

0
image_editor_output_image1461720696-1657777315588.jpg

ಬೆಂಗಳೂರು: ಕಿಕ್ ಬಾಕ್ಸಿಂಗ್ನಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಯುವಕ‌ನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ಯುವಕನನ್ನು ನಿಖಿಲ್ (24)ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ಕೆಂಗೇರಿಯಲ್ಲಿ ಕೆ1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಜುಲೈ 10ರಂದು ನಡೆದ ಕಿಕ್ ಬಾಕ್ಸಿಂಗ್​ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ.

ಇನ್ನು ಕಿಕ್ ಬಾಕ್ಸಿಂಗ್​ನ ರಿಂಗ್‌ನಲ್ಲಿ ಸೆಣಸಾಡುತ್ತಿರುವಾಗ ಎದುರಾಳಿಯು ನಿಖಿಲ್​ ತಲೆಗೆ ಹೊಡೆದ ಏಟಿಗೆ ಬಾಕ್ಸಿಂಗ್ ರಿಂಗ್​ನಲ್ಲೇ ನಿಖಿಲ್​ ಕೆಳಗೆ ಬಿದ್ದವರು ಮೇಲಕ್ಕೆ ಏಳಲೇ ಇಲ್ಲ. ತಕ್ಷಣ ಅವರನ್ನು ಬೆಂಗಳೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಎರಡು ದಿನ ಕೋಮಾದಲ್ಲಿದ್ದ ನಿಖಿಲ್, ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದಿದ್ದಾನೆ.

Leave a Reply

Your email address will not be published. Required fields are marked *

error: Content is protected !!