June 12, 2026

ಬೆಳ್ತಂಗಡಿ: ಹೃದಯಾಘಾತದಿಂದ ಉಪನ್ಯಾಸಕಿ ಮೃತ್ಯು

0
IMG-20220714-WA0000.jpg

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ (40) ಅವರು ಹೃದಯಾಘಾತದಿಂದ ಜು.14 ರಂದು ಮೃತಪಟ್ಟಿರುವ ಘಟನೆ ನಡೆದಿದೆ.

ಮಲ್ಲಿಕಾ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದು, ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇನ್ನು ಮಲ್ಲಿಕಾ ಅವರು ಪಿಲಿಚಂಡಿ ಕಲ್ಲು ನಿವಾಸಿಯಾಗಿದ್ದು, ಪ್ರಸ್ತುತ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!