February 2, 2026

ಇಂದಿನಿಂದ ದೇಶದ ಎಲ್ಲಾ ನಾಗರಿಕರಿಗೆ ಉಚಿತ ಬೂಸ್ಟರ್ ಡೋಸ್

0
image_editor_output_image-710771603-1657862856619.jpg

ನವದೆಹಲಿ: 18ರಿಂದ 59 ವರ್ಷದವರೆಗಿನ ದೇಶದ ಎಲ್ಲಾ ನಾಗರಿಕರಿಗೆ ಕೇಂದ್ರ ಸರ್ಕಾರ ಇಂದು ಜುಲೈ 15 ಶುಕ್ರವಾರದಿಂದ ಉಚಿತ ಬೂಸ್ಟರ್ ಡೋಸ್ ನೀಡಲಿದೆ. ಇದು 75 ದಿನಗಳ ವಿಶೇಷ ಕೋವಿಡ್ ಲಸಿಕೆ ಅಭಿಯಾನದ ಭಾಗವಾಗಿದೆ. 

ದೇಶಕ್ಕೆ ಸ್ವಾತಂತ್ಯ ಸಿಕ್ಕಿ 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವರ್ಷವಿಡೀ ಆಜಾದ್ ಕಿ ಅಮೃತ ಮಹೋತ್ಸವ ಸಂಭ್ರಮಾಚರಣೆ ಮಾಡುತ್ತಿದ್ದು, ಇದರ ಅಂಗವಾಗಿ ಮುಂದಿನ 75 ದಿನಗಳವರೆಗೆ ಉಚಿತ ಬೂಸ್ಟರ್ ಡೋಸ್ ನ್ನು ನೀಡುತ್ತಿದೆ. 

ಜುಲೈ 15ರಿಂದ 75 ದಿನಗಳ ಕಾಲ ಆಜಾದ್ ಕಿ ಅಮೃತ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನ ಕೈಗೊಳ್ಳುತ್ತಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ದೇಶದ ಎಲ್ಲಾ ನಾಗರಿಕರಿಗೆ ಸರ್ಕಾರಿ ಕೇಂದ್ರಗಳಲ್ಲಿ ಉಚಿತ ಬೂಸ್ಟರ್ ಡೋಸ್ ನ್ನು ನೀಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಟ್ವೀಟ್ ಮೂಲಕ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!