ಗೋಟಬಯ ರಾಜಪಕ್ಸ ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಕೊಲಂಬೋ: ದ್ವೀಪರಾಷ್ಟ್ರದಲ್ಲಿನ ಆರ್ಥಿಕ ದಿವಾಳಿತ, ಅಸಮರ್ಪಕ ನಿರ್ವಹಣೆಗಾಗಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಒಂದು ವಾರ ನಡೆದ ನಾಟಕೀಯ ಬೆಳವಣಿಗೆ ನಂತರ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಂಸತ್ತಿನ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ದನ ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ
73 ವರ್ಷದ ಗೋಟಬಯ, ಖಾಸಗಿ ಭೇಟಿಯಲ್ಲಿ ಸಿಂಗಾಪುರಕ್ಕೆ ತೆರಳುತ್ತಿದ್ದಂತೆಯೇ, ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದಾರೆ. ಶುಕ್ರವಾರ ಬೆಳಗ್ಗೆ ಅಧ್ಯಕ್ಷ ರಾಜಪಕ್ಸ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸ್ಪೀಕರ್ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸ್ಪೀಕರ್ ಸಂಕ್ಷಿಪ್ತ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.




