ರಾಜ್ಯದಲ್ಲಿ ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ
ಬೆಂಗಳೂರು: ಕೊರೊನಾ ಸೋಂಕು ತಡೆ ಹಿನ್ನೆಲೆ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಶುಕ್ರವಾರದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ವಾಪಾಸ್ ಪಡೆದಿದೆ.
ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಪಿ ರವಿ ಕುಮಾರ್ ನೂತನ ಆದೇಶ ಹೊರಡಿಸಿದ್ದು, “ರಾಜ್ಯದಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ನಿಷೇಧ ಜಾರಿಯಲ್ಲಿತ್ತು. ನೈಟ್ ಕರ್ಫ್ಯೂ ಸಂಬಂಧ ಅಕ್ಟೋಬರ್ 25ಕ್ಕೆ ಪರಿಷ್ಕೃತ ಆದೇಶ ಹೊರಡಿಸಿತ್ತು. ಇದೀಗ ನೈಟ್ ಕರ್ಫ್ಯೂ ಅನ್ನು ಸಂಪೂರ್ಣವಾಗಿ ತೆಗೆದು ಹಾಕಲಾಗಿದೆ” ಎಂದು ತಿಳಿಸಿದ್ಧಾರೆ.
ಇನ್ನು ಕುದುರೆ ರೇಸ್‌ಗೆ ಕೂಡಾ ಅನುಮತಿ ನೀಡಲಾಗಿದ್ದು, ಕುದುರೆ ರೇಸ್‌ನಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೊರೊನಾ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದಿರುವುದು ಕಡ್ಡಾಯ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.