February 3, 2026

ವಿಧಾನಸೌಧದಲ್ಲಿ ಸಿಎಂ ಜೊತೆ ಮಿಂಚಿದ ಪೆರುವಾಯಿಯ ನಫೀಸಾ..!

0
IMG-20220715-WA0015.jpg

ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಆಯೋಜಿಸಿರುವ ವಿಶ್ವ ಯುವ ಕೌಶಲ್ಯ ದಿನಾಚರಣೆ-2022 ರಲ್ಲಿ ರಾಜ್ಯದ ಐವರು ಸ್ವಚ್ಛವಾಹಿನಿ ವಾಹನದ ಚಾಲಕರ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪೆರುವಾಯಿ ಗ್ರಾಮ ಪಂಚಾಯತು ಉಪಾಧ್ಯಕ್ಷೆ ನಫೀಸಾ ಅವರು ಭಾಗವಹಿಸಿದ್ದರು. ಈ ಸಂದರ್ಭ ಮುಖ್ಯಮಂತ್ರಿ ಬೊಮ್ಮಾಯಿ ಅವರ ಭಾಷಣದಲ್ಲಿ ಪ್ರಶಂಸೆಯ ನುಡಿಗೆ ಭಾಜನರಾದರು.

ನಫೀಸಾ ಅವರು ಪೆರುವಾಯಿ ಗ್ರಾ.ಪಂ ಉಪಾಧ್ಯಕ್ಷರಾಗಿದ್ದಾರೆ. ತ್ಯಾಜ್ಯ ವಾಹನಕ್ಕೆ ಚಾಲಕರಾಗಿ ಪಂಚಾಯಿತಿಯ ಉಪಾಧ್ಯಕ್ಷೆ ನಫೀಸಾ ಅವರನ್ನು ಪಂಚಾಯಿತಿ ಅಭಿವೃಧ್ಧಿ ಅಧಿಕಾರಿ ಹಾಗೂ ಅಧ್ಯಕ್ಷರ ಮತ್ತು ಸದಸ್ಯರ ಒಪ್ಪಿಗೆ ಪಡೆದುಕೊಂಡು ಚಾಲಕರಾಗಿ ನೇಮಿಸಿದ್ದರು. ಇವರು ಪೆರುವಾಯಿ ಗ್ರಾಮದಲ್ಲಿ ತ್ಯಾಜ್ಯ ವಾಹನವನ್ನು ಚಲಾಯಿಸಿಕೊಂಡು ಹೋಗಿ ತ್ಯಾಜ್ಯ ಸಂಗ್ರಹಿಸುತ್ತಿದ್ದಾರೆ. ಇದರಿಂದ ನಫೀಸಾ ಅವರು ಜನಮನ್ನಣೆ ಗಳಿಸಿದ್ದರು.

ಸೆಲ್ಫಿ ವಿತ್ ಸಿಎಂ:
ಇನ್ನು ಕಾರ್ಯಕ್ರಮದಲ್ಲಿ ಸಂಜೀವಿನಿ ಯೋಜನೆಯಡಿ ತರಬೇತಿ ಪಡೆದವರನ್ನು ವೇದಿಕೆ ಮೇಲೆ ಕರೆಸಿಕೊಂಡು ಸಿಎಂ ಬೊಮ್ಮಾಯಿ ಮಾತನಾಡುತ್ತಿದ್ದರು. ಆ ವೇಳೆ ಗುಂಪಿನಲ್ಲಿದ್ದ ಮಹಿಳೆಯೊಬ್ಬರು ಸಿಎಂ ಜೊತೆ ಸೆಲ್ಫಿ ತೆಗೆದುಕೊಂಡರು. ತಮ್ಮೊಂದಿಗೆ ಸೆಲ್ಫಿ ತೆಗೆದುಕೊಂಡ ಮಹಿಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಎಂದು ಸಿಎಂ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು. ಕೌಶಲ್ಯ ಅಭಿವೃದ್ಧಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಈ ಸಂದರ್ಭ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!