ರಾಷ್ಟ್ರಪತಿ ಆಯ್ಕೆಯ ಚುನಾವಣೆ: ಪ್ರಧಾನಿ ಸೇರಿದಂತೆ ದೇಶದ್ಯಂತ ಸಂಸದರು, ಶಾಸಕರು ಮತದಾನ
ನವದೆಹಲಿ: ದೇಶದ ಪ್ರಥಮ ಪ್ರಜೆಯ ಆಯ್ಕೆಯ ಚುನಾವಣೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ್ಯಂತ ಸಂಸದರು, ಶಾಸಕರು ಮತ ಚಲಾಯಿಸುತ್ತಿದ್ದಾರೆ.
ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಮತದಾನ ಮಾಡಲಿದ್ದು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿ ಇದ್ದಾರೆ.
ಇನ್ನು ಸಂಸತ್ ಭವನ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆದು, ಜುಲೈ




