February 2, 2026

ಬೀದಿಯಲ್ಲಿ ಆಟವಾಡುತ್ತಿದ್ದ ಜನರ ಮೇಲೆ ಗುಂಡಿನ ದಾಳಿ: ನಾಲ್ವರು ಮೃತ್ಯು

0
image_editor_output_image822110538-1658123085311.jpg

ಜೋಹಾನ್ಸ್‌ಬರ್ಗ್‌: ಬೀದಿಯಲ್ಲಿ ಆಟವಾಡುತ್ತಿದ್ದ ಜನರ ಗುಂಪಿನ ಮೇಲೆ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ.

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಉಪನಗರದಲ್ಲಿ ಭಾನುವಾರ ಸಂಜೆ ಈ ಕೃತ್ಯ ನಡೆದಿದ್ದು, ಗುಂಡೇಟು ತಿಂದು ನಾಲ್ವರು ಮೃತರಾದರೆ, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗುಂಡು ಹಾರಿಸಿದ ಬಳಿಕ ಅಪರಿಚಿತ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿಗೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ. ದಾಳಿಕೋರನ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರದ ಹಿಂದೆ ದಕ್ಷಿಣ ಆಫ್ರಿಕಾದ ಲೆನಾಸಿಯದಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ದಾಳಿ ಪ್ರಕರಣದಲ್ಲಿ 20 ಜನರು ಮೃತಪಟ್ಟಿದ್ದರು.

Leave a Reply

Your email address will not be published. Required fields are marked *

error: Content is protected !!