ವಿಟ್ಲ: ಮನೆಯಿಂದ ಚಿನ್ನಾಭರಣ ಕಳವು ಪ್ರಕರಣ:
ಮನೆಯಲ್ಲಿ ಕೆಲಸಕ್ಕಿದ್ದ ದಂಪತಿಗಳನ್ನು ಬಂಧಿಸಿದ ಪೊಲೀಸರು
ವಿಟ್ಲ: ವಿಟ್ಲ ಮುಡ್ನೂರು ದಂಬೆತಾರು ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಕೆಲಸಕ್ಕಿದ್ದ ಪುತ್ತೂರು ಮೂಲದ ದಂಪತಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಸರ್ವೆ ಬಾವಿಕಟ್ಟೆ ನಿವಾಸಿ ಪ್ರಮೋದ್(26) ಮತ್ತು ಅವನ ಪತ್ನಿ ಸುಮತಿ(25) ಎಂದು ಗುರುತಿಸಲಾಗಿದೆ.
ಇವರಿಬ್ಬರು ದಂಬೆತಾರು ವಿನಯ ಚಂದ್ರನಾಯಕ್ ರವರ ಮನೆಯಲ್ಲಿ ಕೂಲಿ ಕೆಲಸಕ್ಕಿದ್ದು, ಮನೆಯ ಬೆಡ್ ರೂಮ್ ನ ಕಪಾಟಿನಲ್ಲಿದ್ದ ಚಿನ್ನದ ಬ್ರಾಸ್ ಲೈಟ್-1, ಚಿನ್ನದ ಲಕ್ಷ್ಮಿ ಚೈನ್-01, ಚಿನ್ನದ ಪದಕ ಸಹಿತ ಚೈನು -1, ಚಿನ್ನದ ಲಕ್ಷ್ಮಿ ಪದಕ ಸಹಿತ ಚೈನ್-01, ಚಿನ್ನದ ಉಂಗುರಗಳು -03 (Total- 98Gram) ಚಿನ್ನಾಭರಣಗಳು , ಸದ್ರಿ ಚಿನ್ನಾಭರಣಗಳ ಒಟ್ಟು ಮೌಲ್ಯ ಅಂದಾಜು 1,48,000/ ರೂಪಾಯಿಯ ಚಿನ್ನಾಭರಣಗಳನ್ನು ಕಳವುಗೈದಿದ್ದರು.
ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಕಳವಾಗಿದ್ದ 98 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ, ಮಂಜುನಾಥ ಟಿ., ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗಳಾದ ಜಯರಾಮ ಕೆ.ಟಿ., ರಕ್ಷಿತ್, ಕರುಣಾಕರ, ಪೊಲೀಸ್ ಕಾನ್ಸ್ಟೇಬಲ್ ಗಳಾದ ಹೇಮರಾಜ್, ಸತೀಶ್, ಮನೋಜ್ ಕುಮಾರ್, ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಸವಿತಾ ರವರು ಪಾಲ್ಗೊಂಡಿದ್ದರು.