ಹೊಟೇಲ್ ನಲ್ಲಿ ತಂಗಿದ್ದ ಪ್ರೇಮಿಗಳ ಖಾಸಗಿ ಕ್ಷಣದ ವಿಡಿಯೊ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್: ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು: ಪ್ರೇಮಿಗಳ ಖಾಸಗಿ ಕ್ಷಣದ ವಿಡಿಯೊ ಚಿತ್ರೀಕರಿಸಿ, ₹ 25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಸಹಕಾರ ನಗರದ ನಿವಾಸಿ ಉಷಾ ಹಾಗೂ ದ್ವಾರಕನಗರದ ಸುರೇಶ್ ಬಾಬು ಬಂಧಿತರು. ಪ್ರೇಮಿಗಳು ನೀಡಿದ್ದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರೇಮಿಗಳು ಯಲಹಂಕ ಬಳಿಯ ಹೋಟೆಲ್‌ವೊಂದರ ಕೊಠಡಿಗೆ ಹಲವು ಬಾರಿ ಹೋಗಿ ಬಂದಿದ್ದರು. ಈ ವಿಷಯ ತಿಳಿದುಕೊಂಡಿದ್ದ ಆರೋಪಿಗಳು, ಪ್ರೇಮಿಗಳ ವಿಡಿಯೊ ಚಿತ್ರೀಕರಣ ಮಾಡಿ ಬ್ಲ್ಯಾಕ್‌ಮೇಲ್ ಮಾಡಲು ಸಂಚು ರೂಪಿಸಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.




