ಟ್ರಕ್ ಹರಿಸಿ ಮಹಿಳಾ ಪಿಎಸ್ಐ ಹತ್ಯೆ: ಆರೋಪಿಯ ಬಂಧನ
ರಾಂಚಿ: ಹರಿಯಾಣದ ನೂಹ್ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾಗಿದ್ದ ಡಿವೈಎಸ್‌ಪಿಯೊಬ್ಬರ ಮೇಲೆ ಟ್ರಕ್ ಹರಿಸಿ ಹತ್ಯೆ ಮಾಡಿದ ಬೆನ್ನಲ್ಲೇ ಅಂತಹದೇ ಮತ್ತೊಂದು ಕೃತ್ಯ ಜಾರ್ಖಂಡ್ ನಲ್ಲಿ ವರದಿಯಾಗಿದೆ.
ಮಂಗಳವಾರ ರಾತ್ರಿ ವೇಳೆ ವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ ಪಿಎಸ್ಐ ಸಂಧ್ಯಾ ಟೋಪ್ನೋ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.
ಸಂಧ್ಯಾ ಅವರನ್ನು ತೂಪುದಾನ ಪ್ರದೇಶದ ಪ್ರಭಾರಿಯಾಗಿ ನೇಮಿಸಲಾಗಿತ್ತು. ಸದ್ಯ ಆರೋಪಿಯನ್ನು ಬಂಧಿಸಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ರಾಂಚಿ ಪೊಲೀಸರು ತಿಳಿಸಿದ್ದಾರೆ.




