March 26, 2026

ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣ: 10ನೇ ತರಗತಿಯ ವಿದ್ಯಾರ್ಥಿಯ ಬಂಧನ

0
image_editor_output_image-1148862575-1658298415700.jpg

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಒಡೆತನದ ರಾಜ ರಾಜೇಶ್ವರಿನಗರದಲ್ಲಿರುವ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಸೋಮವಾರ ಬಾಂಬ್ ಬೆದರಿಕೆ ಬಂದಿತ್ತು. ಹುಚ್ಚಾ ವೆಂಕಟ್ ಹೆಸರಿನ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಅದೇ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಎಂಬುದಾಗಿ ತಿಳಿದುಬಂದಿದೆ

ಬಾಂಬ್ ಬೆದರಿಕೆ ಬಂದಿದ್ದ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ನಲ್ಲಿಯೇ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯಿಂದಲೇ ಈ ಕೃತ್ಯ ನಡೆದಿದೆ ಎಂಬುದು ಇದೀಗ ಬಹಿರಂಗವಾಗಿದೆ.

ಸೋಮವಾರದಿಂದ 10ನೇ ತರಗತಿಯ ಮೊದಲನೇ ಪರೀಕ್ಷೆ ಇತ್ತು. ಪರೀಕ್ಷೆಯನ್ನು ಮುಂದೂಡುವ ಸಲುವಾಗಿ ವಿದ್ಯಾರ್ಥಿ ಈ ರೀತಿ ಪ್ಲ್ಯಾನ್ ಮಾಡಿದ್ದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಅಪ್ರಾಪ್ತ ಬಾಲಕ ಹಿನ್ನೆಲೆ ಆತನ ಹೆಸರು ಬಹಿರಂಗಪಡಿಸಲು ಸಾಧ್ಯವಿಲ್ಲ. ಘಟನೆ ಸಂಬಂಧ ಬಾಲನ್ಯಾಯ ಕಾಯ್ದೆ ಪ್ರಕಾರ ಬಾಲಕನ ಮೇಲೆ ಕ್ರಮ ಜರುಗಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜು.21ರಂದು ಪರೀಕ್ಷೆಗಳು ನಿಗದಿ ಆಗಿದ್ದವು. ಆದರೆ, ವಿದ್ಯಾರ್ಥಿ ಹೆಚ್ಚು ಓದಿರಲಿಲ್ಲ. ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಭಯವಿತ್ತು. ಪರೀಕ್ಷೆ ಮುಂದೂಡುವ ಉದ್ದೇಶದಿಂದ ಬಾಂಬ್ ಬೆದರಿಕೆ ಕಳುಹಿಸಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ.

ತಂದೆಯ ಲ್ಯಾಪ್‍ಟಾಪ್‍ನಲ್ಲಿ ಹುಚ್ಚ ವೆಂಕಟ್ ಹೆಸರಿನಲ್ಲಿ ಇ-ಮೇಲ್ ಸೃಷ್ಟಿಸಿದ್ದ ಬಾಲಕ, ಅದೇ ಇ-ಮೇಲ್‍ನಿಂದ ಶಾಲೆ ಇ-ಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿದ್ದ. ಶಾಲೆ ಆವರಣದಲ್ಲಿ ಬಾಂಬ್ ಸ್ಫೋಟಗೊಳ್ಳುವುದಾಗಿ ಬೆದರಿಸಿದ್ದ ಎನ್ನುವ ಮಾಹಿತಿಯೂ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!