ಕಬಕ: ಬೈಕ್ ಅಪಘಾತ: ಇಬ್ಬರು ಸವಾರರು ಗಾಯ
ಪುತ್ತೂರು: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಪರ್ಲೊಟ್ಟು ಎಂಬಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತಗೊಂಡ ಘಟನೆ ಜು.19 ರಂದು ತಡರಾತ್ರಿ ನಡೆದಿದೆ.
ಘಟನೆಯಿಂದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಬೈಕ್ ಸವಾರನನ್ನು ಹಾಗೂ ಸಹಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳದಲ್ಲಿದ್ದ ಕೆಲವರು ಬೈಕ್ ಗೆ ಕಾಡು ಹಂದಿ ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿದೆ ಏನ್ನುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.




