March 26, 2026

ಬೆಳ್ಳಾರೆ: ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಗಂಭೀರಗೊಂಡ ಯುವಕ ಆಸ್ಪತ್ರೆಗೆ ದಾಖಲು

0
IMG-20220720-WA0003.jpg

ಪುತ್ತೂರು: ಯುವಕನೋರ್ವನ ಮೇಲೆ ತಂಡವೊಂದು ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಮಸೂದ್(21) ಎಂದು ಗುರುತಿಸಲಾಗಿದೆ.

ಮಸೂದ್ ಮೇಲೆ ತಂಡವೊಂದು ಮಾರಾಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಆತನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಮಸೂದ್ ಮೂಲತ ಕಳಂಜದ ನಿವಾಸಿ ಅಲ್ಲ ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ ಎನ್ನಲಾಗುತ್ತಿದ್ದು, ಮಸೂದ್ ಹಾಗೂ ಸ್ಥಳೀಯ ಯುವಕನ ಮಧ್ಯೆ ಜು.19 ರಂದು ರಾತ್ರಿ ಅಂಗಡಿಯೊಂದರ ಸಮೀಪ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಈ ವೇಳೆ ಪರಸ್ಪರರು ಹೊಡೆದಾಡಿಕೊಂಡಿದ್ದಾರೆ. ಸ್ವಲ್ಪ ಸಮಯದ ಬಳಿಕ ಬೇರೆ ಯುವಕರು ಈ ಜಗಳಕ್ಕೆ ಎಂಟ್ರಿ ಕೊಟ್ಟಿದ್ದು ಈ ವೇಳೆ ಹೊಡೆದಾಟ ವಿಪರೀತಕ್ಕೆರಿದೆ ಎನ್ನಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಲೇ ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ, ತನಿಖೆ ಕೈಗೆತ್ತಿಕೊಂಡಿದ್ದಾರೆ. ಕ್ಷಿಪ್ರ ಕಾರ್ಯಚರಣೆ ನಡೆಸಿದ ಪೊಲೀಸರು ಹೊಡೆದಾಟದಲ್ಲಿ ಭಾಗಿಯಾದ 4-5 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!