ಶಿರೂರಿನ ಟೋಲ್ ಗೇಟ್ ಕಂಬಕ್ಕೆ ಆ್ಯಂಬುಲೆನ್ಸ್ ಢಿಕ್ಕಿ: ಮೂವರು ಮೃತ್ಯು, ಓರ್ವ ಗಂಭೀರ ಗಾಯ
ಬೈಂದೂರು: ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಟೋಲ್ ಗೇಟ್ ನ ಕಂಬಕ್ಕೆ ಢಿಕ್ಕಿ ಹೊಡೆದ ಬಳಿಕ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತಿವೇಗದಿಂದ ಚಲಿಸುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಶಿರೂರಿನ ಟೋಲ್ ಗೇಟ್ ನ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆಯ ಸುಮಾರಿಗೆ ನಡೆದಿದೆ.




