ಕುಂದಾಪುರ: ಟೋಲ್ ಗೇಟ್ ಗೆ ಆಂಬ್ಯುಲೆನ್ಸ್ ಡಿಕ್ಕಿ: ಮೂವರು ಮೃತ್ಯು
ಕುಂದಾಪುರ: ಶಿರೂರು ಟೋಲ್ ಗೇಟ್ ಗೆ ಅಂಬ್ಯುಲೆನ್ಸ್ ವಾಹನ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದ ದುರ್ಘಟನೆ ನಡೆದಿದೆ. ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ
ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ಶಿರೂರು ಟೋಲ್ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.





