ಕಾರವಾರ ಕರಾವಳಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಏರ್ ಕ್ರಾಫ್ಟ್ ನೌಕೆಗೆ ಬೆಂಕಿ
ಹೊಸದಿಲ್ಲಿ: ಕರ್ನಾಟಕದ ಕಾರವಾರ ಕರಾವಳಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಏರ್ ಕ್ರಾಫ್ಟ್ ನೌಕೆ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ.
ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ನೌಕಾಪಡೆ ತಿಳಿಸಿದೆ.
ಘಟನೆಯ ಕುರಿತು ತನಿಖೆ ನಡೆಸಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ.




