March 26, 2026

ಆರತಕ್ಷತೆ ವೇಳೆ ಮದುಮಗ ಕುಸಿದು ಬಿದ್ದು ಮೃತ್ಯು

0
image_editor_output_image-1965677460-1658393239280.jpg

ವಿಜಯನಗರ: ಆರತಕ್ಷತೆ ವೇಳೆ ಮದುಮಗ ಹೃದಯಾಘಾತದಿಂದ ಕುಸಿದು ಬಿದ್ದು  ಮೃತಪಟ್ಟಿರುವುದಾಗಿ ವರದಿಯಾಗಿದೆ.

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬುಧವಾರ ಸಂಜೆ ಹೊನ್ನೂರ ಸ್ವಾಮಿ ಅವರ ಮದುವೆ ಆರತಕ್ಷತೆ ನಡೆಯುತ್ತಿತ್ತು. ಈ ವೇಳೆ ಎದೆ ನೋವಿನಿಂದ ಕುಸಿದು ಬಿದ್ದು ಅಸ್ವಸ್ಥಗೊಂಡ ಅವರನ್ನ ಕೂಡಲೇ ಸಮೀಪದ ಖಾಸಗಿ ಕ್ಲಿನಿಕ್ ಗೆ ಕರೆದೊಯ್ಯಲಾಗಿತ್ತು.

ಹೆಚ್ಚಿನ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮದುಮಗ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!