ಬಂಟ್ವಾಳ: ನರ್ತೆ( ಶಂಕುಹುಳು) ಹೆಕ್ಕುವ ವೇಳೆ ಕೆಸರಲ್ಲಿ ಮುಳುಗಿ ಯುವಕ ಮೃತ್ಯು
ಬಂಟ್ವಾಳ: ಪೊಳಲಿ ಸಮೀಪದ ಕಲ್ಕುಟದ ಗದ್ದೆಯೊಂದರಲ್ಲಿ ನರ್ತೆ( ಶಂಕುಹುಳು) ಹೆಕ್ಕುವ ವೇಳೆ ಯುವಕನೋರ್ವ ನೀರು ಹಾಗೂ ಕೆಸರಿನಲ್ಲಿ ಹೂತು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಕರಿಯಂಗಳ ಗ್ರಾಮದ ಸಾಣೂರುಪದವು ನಿವಾಸಿ ದಾಮೋದರ್ (31) ಮೃತಪಟ್ಟ ಯುವಕ.
ದಾಮೋದರ್ ಗದ್ದೆಯ ಬದುವಿನಲ್ಲಿ ಕೂತು ನರ್ತೆ ಹೆಕ್ಕುತ್ತಿದ್ದ ವೇಳೆ ಆಯತಪ್ಪಿ ಗದ್ದೆಗೆ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿನ ಜತೆಗೆ ಕೆಸರು ಕೂಡ ತುಂಬಿಕೊಂಡಿದ್ದು, ಈ ವೇಳೆ ಅವರ ಕುತ್ತಿಗೆವರೆಗೂ ಹೂತು ಹೋಗಿದ್ದಾರೆ. ಬಳಿಕ ಮೇಲಕ್ಕೆ ಬರಲು ಆಗದೆ ಮೃತಪಟ್ಟಿದ್ದಾರೆ.




