ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಕರೆ: ವ್ಯಕ್ತಿಯ ಬಂಧನ
ನವದೆಹಲಿ: ಪಟ್ನಾದಿಂದ ದೆಹಲಿಗೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೋರ್ವ ಹೇಳಿದ್ದರಿಂದ ಕ್ಷಣಕಾಲ ಪಟ್ನಾ ವಿಮಾನ ನಿಲ್ದಾಣದಲ್ಲಿ ಗೊಂದಲ ಉಂಟಾಗಿದೆ.
ಗುರುವಾರ ರಾತ್ರಿ 8.20ಕ್ಕೆ ಹೊರಡಬೇಕಿದ್ದ ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆ ಕರೆ ಬಂದ ಬಳಿಕ ಸಂಪೂರ್ಣವಾಗಿ ತಪಾಸಣೆ ಮಾಡಲಾಗಿದೆ.
ಆದರೆ ಅದೊಂದು ಹುಸಿ ಬಾಂಬ್ ಕರೆ ಎಂದು ತನಿಖೆಯ ಬಳಿಕ ಪತ್ತೆಯಾಗಿದೆ.
ಬಾಂಬ್ ಬೆದರಿಕೆ ಬಂದ ಕೂಡಲೇ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ, ತಪಾಸಣೆ ನಡೆಸಲಾಗಿದೆ.
ಹುಸಿ ಕರೆ ಎಂದು ಗೊತ್ತಾದ ಬಳಿಕ, ಬಾಂಬ್ ಬೆದರಿಕೆ ಒಡ್ಡಿದ್ದ ಪ್ರಯಾಣಿಕನನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.




