ಬೈಕ್, ಕಾರ್ ನಡುವೆ ಅಪಘಾತ: ಓರ್ವ ಸಾವು, ಇನ್ನೋರ್ವ ಗಂಭೀರ
ಚಿಕ್ಕಮಗಳೂರು: ಬೈಕ್ ಗೆ ಕಾರ್ ಢಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಶಿಡ್ಲೆ ಬಳಿ ನಡೆದಿದೆ.
ಶೃಂಗೇರಿ ತಾಲೂಕಿನ ಬೇಸೂರು ಗ್ರಾಮದ ನಿವಾಸಿ, ಶೇಖರ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.
ಬೈಕ್‌ಗೆ ಕಾರ್ ಢಿಕ್ಕಿಯಾದ ರಭಸಕ್ಕೆ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಶೇಖರ್ ಮೃತಪಟ್ಟಿದ್ದಾರೆ. ವಿಜಯೇಂದ್ರ ಎಂಬುವರ ಸ್ಥಿತಿ ಗಂಭೀರ ಎಂದು ತಿಳಿದುಬಂದಿದೆ.




