ಕೇರಳದ ವಯನಾಡ್ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ಹಂದಿಗಳನ್ನು ಕೊಲ್ಲಲು ಆದೇಶ
ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮನಂತವಾಡಿಯಲ್ಲಿನ ಎರಡು ಫಾರ್ಮ್ ಗಳಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದ್ದು, ಅವುಗಳನ್ನು ಕೊಲ್ಲಲು ಆದೇಶಿಸಲಾಗಿದೆ.
ಫಾರ್ಮ್ ಒಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ 2 ಹಂದಿ ಫಾರ್ಮ್ ಗಳ ಹಂದಿಗಳ ಮಾದರಿಗಳನ್ನು ಪರೀಕ್ಷೆಗೆಂದು ಭೋಪಾಲ್‌ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಲ್ಯಾಬ್‌ಗೆ ಕಳುಹಿಸಲಾಗಿತ್ತು.
“ಪರೀಕ್ಷಾ ಫಲಿತಾಂಶದಲ್ಲಿ ಸೋಂಕು ದೃಢಪಟ್ಟಿದೆ. ಎರಡನೇ ಫಾರ್ಮ್‌ನ 300 ಹಂದಿಗಳನ್ನು ಕೊಲ್ಲಲು ನಿರ್ದೇಶನಗಳನ್ನು ನೀಡಲಾಗಿದೆ. ರೋಗ ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ” ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿ ತಿಳಿದ್ದಾರೆ.
ಬಿಹಾರ ಮತ್ತು ಕೆಲವು ಈಶಾನ್ಯ ರಾಜ್ಯಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಕೇಂದ್ರದ ಎಚ್ಚರಿಕೆಯ ನಂತರ ರಾಜ್ಯವು ಈ ತಿಂಗಳ ಆರಂಭದಲ್ಲಿ ಜೈವಿಕ-ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಿತ್ತು.
ಆಫ್ರಿಕನ್ ಹಂದಿ ಜ್ವರವು ದೇಶೀಯ ಹಂದಿಗಳ ಮೇಲೆ ಪರಿಣಾಮ ಬೀರುವ ಅತ್ಯಂತ ಸಾಂಕ್ರಾಮಿಕ ಮತ್ತು ಮಾರಣಾಂತಿಕ ವೈರಲ್ ಕಾಯಿಲೆಯಾಗಿದೆ.




