March 26, 2026

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಚುಂಬನ ವೀಡಿಯೋ ವೈರಲ್ ಪ್ರಕರಣ:
8 ಮಂದಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

0
IMG_20220721_110646.jpg

ಮಂಗಳೂರು: ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಚುಂಬನದ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ೮ ಮಂದಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟ್ರುತ್ ಆಂಡ್ ಡೇರ್ ಗೇಮ್ ಹೆಸರಲ್ಲಿ ಚುಂಬನ:
ಇನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ಟ್ರುತ್ ಆಂಡ್ ಡೇರ್ ಗೇಮ್ ಆಟದ ಸಂದರ್ಭದಲ್ಲಿ ಚುಂಬನ ನಡೆಸಲಾಗಿದೆ. ವಶಕ್ಕೆ ಪಡೆದ ವಿದ್ಯಾರ್ಥಿಗಳಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕೊಠಡಿಯಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿಗಳು ಗೇಮ್ಸ್ ಹೆಸರಲ್ಲಿ ವಿದ್ಯಾರ್ಥಿಗಳನ್ನು ಕೊಠಡಿಗೆ ಕರೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿದೆ ಹಲವು ವೀಡಿಯೋಗಳು:
ಸದ್ಯ ವಿದ್ಯಾರ್ಥಿಗಳು ಚುಂಬನ ಮಾಡಿರುವ ವೀಡಿಯೋ ವೈರಲ್ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಇಂತಹ ಹಲವು ವೀಡಿಯೋಗಳಿವೆ ಎನ್ನುವ ಅನುಮಾನವನ್ನು ಪೊಲೀಸ್ ಕಮಿಷನರ್ ವ್ಯಕ್ತಪಡಿಸಿದ್ದಾರೆ. ಅಪಾರ್ಟ್ ಮೆಂಟ್ ನಲ್ಲಿ ಇನ್ನಷ್ಟು ಅಕ್ರಮ ಚಟುವಟಿಕೆ ನಡೆದಿದೆ ಎಂದು ಹೇಳಲಾಗಿದೆ. ಸದ್ಯ ವಶಕ್ಕೆ ಪಡೆದ ವಿದ್ಯಾರ್ಥಿಯಿಂದ ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

ಮದ್ಯ ಸೇವಿಸಿರುವ ಆರೋಪ:
ಅಪಾರ್ಟ್ ಮೆಂಟ್ ನಲ್ಲಿ ವಿದ್ಯಾರ್ಥಿಗಳು ಮದ್ಯ ಸೇವನೆ ಸೇರಿದಂತೆ ಹಲವು ನಿಯಮಗಳನ್ನು ಉಲ್ಲಂಘಿಸಿರುವ ಆರೋಪ ವ್ಯಕ್ತವಾಗಿದೆ. ಈ ಕಾರಣಕ್ಕಾಗಿ ಅಪಾರ್ಟ್ ಮೆಂಟ್ ಮಾಲಕರು ವಿದ್ಯಾರ್ಥಿಗಳನ್ನು ಪ್ರವೇಶ ನಿರಾಕರಿಸಿದ್ದರು. ವಿದ್ಯಾರ್ಥಿಗಳ ಪೈಕಿ ಕೆಲವರು ಮಂಗಳೂರಿನವರಾಗಿದ್ದು, ಇನ್ನು ಕೆಲವರು, ಹೊರ ಜಿಲ್ಲೆಯವರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್‌ ನಲ್ಲಿ ತೊಡಗಿದ್ದರು ಎನ್ನಲಾಗಿದೆ. ಕಾಲೇಜು ಯೂನಿಫಾರಂನಲ್ಲೇ ಕಿಸ್ಸಿಂಗ್ ನಲ್ಲಿ ತೊಡಗಿರುವ ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿದ್ಯಾರ್ಥಿಗಳ ತಂಡದ ಮಧ್ಯೆಯಿದ್ದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಲಿಪ್ ಲಾಕ್ ಮಾಡಿರುವ ವೀಡಿಯೋ ವೈರಲ್ ಆಗಿದೆ. ಇದೀಗ ಈ ವಿಡಿಯೋ ಮಾಡಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದ ಕ್ರಮಕ್ಕೆ ‌ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!