ಪಶ್ಚಿಮ ಬಂಗಾಳದ ಸಚಿವನ ಆಪ್ತನ ಮನೆ ಮೇಲೆ ಈ.ಡಿ.ದಾಳಿ: 20 ಕೋಟಿ ರೂ. ನಗದು ವಶಕ್ಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಸಹಚರ ಅರ್ಪಿತಾ ಮುಖರ್ಜಿ ಮನೆಯಿಂದ ಜಾರಿ ನಿರ್ದೇಶನಾಲಯ ಇಂದು ಬರೋಬ್ಬರಿ 20 ಕೋಟಿ ರೂ. ನಗದು ವಶಪಡಿಸಿಕೊಂಡಿದೆ.
ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿದೆ. ‘ಈ ಮೊತ್ತವು ಎಸ್‌ಎಸ್‌ಸಿ ಹಗರಣದ ಅಪರಾಧದ ಆದಾಯ ಎಂದು ಶಂಕಿಸಲಾಗಿದೆ’ ಎಂದು ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.
ಸಚಿವ ಪಾರ್ಥ ಚಟರ್ಜಿ ಅವರಲ್ಲದೆ, ಶಿಕ್ಷಣ ಖಾತೆ ರಾಜ್ಯ ಸಚಿವ ಪರೇಶ್ ಸಿ ಅಧಿಕಾರಿ, ಶಾಸಕ ಮಾಣಿಕ್ ಭಟ್ಟಾಚಾರ್ಯ ಮತ್ತು ಇತರರ ಮನೆ ಮೇಲೂ ಇಡಿ ದಾಳಿ ನಡೆಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸರ್ಕಾರದಲ್ಲಿ ಇದುವರೆಗೂ ನಡೆದ ದಾಳಿಯಲ್ಲಿ ಸಿಕ್ಕಿರುವ ಅತಿ ದೊಡ್ಡ ಮೊತ್ತ ಇದಾಗಿದೆ .


