March 26, 2026

ಮಂಗಳೂರಿನ ಅಪಾರ್ಟ್‌ ಮೆಂಟ್‌ ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣ: 5 ಮಂದಿ ವಿದ್ಯಾರ್ಥಿಗಳ ಬಂಧನ

0
image_editor_output_image-833423770-1658565400299.jpg

ಮಂಗಳೂರಿನ ಬಾವುಟಗುಡ್ಡೆ ಸಮೀಪದ ಅಪಾರ್ಟ್‌ ಮೆಂಟ್‌ ನಲ್ಲಿ ನಡೆದ ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಒಟ್ಟು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಬಂಧಿತರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದು, ಅವರನ್ನು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಅವರನ್ನು ಹೆತ್ತವರಿಗೆ ಒಪ್ಪಿಸಿದೆ.

ಅಗತ್ಯ ಬಿದ್ದಾಗ ತನಿಖಾಧಿಕಾರಿ ಯವರ ಮುಂದೆ ಹಾಜರಾಗುವಂತೆ ಆದೇಶ ನೀಡಿದೆ ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಬಂಧಿತರಲ್ಲಿ ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದವನು ಕೂಡ ಸೇರಿದ್ದಾರೆ. ಒಟ್ಟು ಸುಮಾರು 8 ಮಂದಿ ವಿದ್ಯಾರ್ಥಿಗಳು ಈ ಕೃತ್ಯದಲ್ಲಿ ಭಾಗವಹಿಸಿದ್ದು, ಈ ಪೈಕಿ ಓರ್ವ ಈಗಾಗಲೇ ವಿದೇಶಕ್ಕೆ ತೆರಳಿದ್ದಾನೆ. ಮೂವರು ವಿದ್ಯಾರ್ಥಿನಿಯರು ದೌರ್ಜನ್ಯಕ್ಕೊಳಗಾಗಿದ್ದು, ಅವರು ಕೂಡ ಅಪ್ರಾಪ್ತ ವಯಸ್ಕರು ಎಂದು ತಿಳಿದುಬಂದಿದೆ.

ಕೃತ್ಯಕ್ಕೆ ಸಂಬಂಧಿಸಿ ಪೋಕ್ಸೊ ಕಾಯ್ದೆಯಡಿ ಮಹಿಳಾ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದೀಗ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯನ್ನು ಸಿಸಿಬಿಗೆ (ನಗರ ಅಪರಾಧ ಪತ್ತೆದಳ) ವಹಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!